ಬಳ್ಳಾರಿಯಲ್ಲಿ ಇಂದು ಭಾರತ್ ಜೋಡೋ ಪಾದಯಾತ್ರೆ: ವ್ಯಂಗ್ಯವಾಗಿ ಸ್ವಾಗತಿಸಿದ  ಸಚಿವ ಶ್ರೀರಾಮುಲು.  

ಬಳ್ಳಾರಿ,ಅಕ್ಟೋಬರ್,15,2022(www.justkannada.in):  ಬಳ್ಳಾರಿಯಲ್ಲಿ ಇಂದು ‘ಭಾರತ್​ ಜೋಡೋ’ ಪಾದಯಾತ್ರೆ ನಡೆಯುತ್ತಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ವ್ಯಂಗ್ಯವಾಡುವ ಮೂಲಕ ಸ್ವಾಗತಕೋರಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, 1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ ಎಂದು ವ್ಯಂಗ್ಯವಾಡಿದ್ದಾರೆ.

ಬಳ್ಳಾರಿ ಜಿಲ್ಲೆ ಅಭಿವೃದ್ದಿಯಲ್ಲಿ ಬಿಜೆಪಿ ಸರ್ಕಾರದ ಕೊಡುಗೆಯೇ ದೊಡ್ಡದು. ಅದು ಜಿಲ್ಲೆಯ ಜನರಿಗೂ ಗೊತ್ತಿದೆ. ಹಾಗಾಗಿ ರಾಹುಲ್‌ ಗಾಂಧಿ ಭಾರತ್‌ ಜೋಡೋ ಯಾತ್ರೆ ಮೂಲಕ ಬಂದು ಏನೇ ಮಾಡಿದರೂ ನಂಬುವುದಿಲ್ಲ. ಅವರಿಗೆ ವಾಸ್ತವದ ಮೇಲೆ ನಂಬಿಕೆಯೇ ಹೊರತು, ಬರೀ ನಾಟಕ ಮಾಡುವವರ ಮೇಲಲ್ಲ. ಬಳ್ಳಾರಿ ಪಾದಯಾತ್ರೆ ನಡೆಸಿ ಮುಖ್ಯಮಂತ್ರಿ ಆದವರೂ ಕೂಡ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಹಣ ಕೊಡದೆ, ಈಗ ಯಾವ ಮುಖ ಇಟ್ಟುಕೊಂಡು ಜನರ ಮುಂದೆ ಭಾಷಣ ಮಾಡುತ್ತೀರಿ? ಎಂದು ಸಿದ್ಧರಾಮಯ್ಯಗೆ ಸಚಿವ ಶ್ರೀರಾಮಲು ಕುಟುಕಿದ್ದಾರೆ.

Key words: Bharat Jodo Padayatra- today –Bellary-Minister- Sriramulu