ಭಾರತ್ ಮಾತಾ ಮಂದಿರ ಉದ್ಘಾಟಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಸಿಎಂ ಬೊಮ್ಮಾಯಿ, ಬಿಎಸ್ ವೈ ಸಾಥ್.

ದಕ್ಷಿಣ ಕನ್ನಡ,ಫೆಬ್ರವರಿ,11,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪವಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಈ ನಡುವೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಪುತ್ತೂರಿನ ಈಶ್ವರಮಂಗಲದಲ್ಲಿರುವ ಭಾರತ್ ಮಾತಾ ಮಂದಿರವನ್ನ ಅಮಿತ್ ಶಾ ಉದ್ಘಾಟಿಸಿದರು.  ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಾಥ್ ನೀಡಿದರು.

2.5 ಎಕರೆ ಪ್ರದೇಶದಲ್ಲಿ, 3 ಕೋಟಿ  ರೂ. ವೆಚ್ಚದಲ್ಲಿ ಭಾರತ್ ಮಾತಾ ಮಂದಿರವನ್ನ ನಿರ್ಮಿಸಲಾಗಿದೆ. ಕ್ಯಾಂಪ್ಕೋ ಮಹೋತ್ಸವದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.

Key words: Bharat Mata Mandir -inaugurated -Union Home Minister- Amit Shah