ಬೆಂಗಳೂರು,ಸೆಪ್ಟಂಬರ್,3,2025 (www.justkannada.in): ಹಿರಿಯ ನಟಿ ಭಾರತಿ ವಿಷ್ಣುವರ್ದನ್ ಮತ್ತು ನಟ ಅನಿರುದ್ಧ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ನಟ ದಿ. ಡಾ. ವಿಷ್ಣುವರ್ದನ್ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಹಿರಿಯ ನಟಿ ಭಾರತಿ ವಿಷ್ಣುವರ್ದನ್ ಮತ್ತು ನಟ ಅನಿರುದ್ಧ್ ಅವರು ಚರ್ಚೆ ನಡೆಸಿದ್ದು ಅಭಿಮಾನ್ ಸ್ಟುಡಿಯೋದಲ್ಲಿ ಡಾ.ವಿಷ್ಣುಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ಮೀಸಲಿಡುವಂತೆ ಮನವಿ ಮಾಡಿದರು.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ‘ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ’ ಎಂದಿದ್ದಾರೆ .
ಬೆಂಗಳೂರಿನ ಅಭಿನವ್ ಸ್ಟುಡಿಯೋದಲ್ಲಿರೋ ವಿಷ್ಣುವರ್ಧನ್ ಸಮಾಧಿ ಕೆಡವಿದ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಸ್ಟುಡಿಯೋದ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು. ಭಾರತಿ ವಿಷ್ಣುವರ್ಧನ್ ಅವರು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
Key words: actress Bharathi Vishnuvardhan, meet, CM Siddaramaiah, Dr. Vishnu memorial