Wednesday, September 9, 2026

BDA Apartments

Home Cinema ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ ಭಾರತಿರಾಜ ನಿಧನ

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ ಭಾರತಿರಾಜ ನಿಧನ

ಚೆನ್ನೈ, ಜೂನ್, 10,2026 (www.justkannada.in): ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ ಹಾಗೂ ನಟ ಭಾರತಿರಾಜ ಅವರು ಬುಧವಾರ ಚೆನ್ನೈಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

1977ರಲ್ಲಿ ಬಿಡುಗಡೆಯಾದ “16 Vayathinile” ಚಿತ್ರದ ಮೂಲಕ ತಮಿಳು ಸಿನಿರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಭಾರತಿರಾಜ, ಗ್ರಾಮೀಣ ಬದುಕು ಮತ್ತು ಮಾನವೀಯ ಸಂಬಂಧಗಳನ್ನು ನೈಜವಾಗಿ ತೆರೆಗೆ ತಂದ ನಿರ್ದೇಶಕರಾಗಿ ಖ್ಯಾತರಾಗಿದ್ದರು. ಹಲವು ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಅವರು ಅನೇಕ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದರು.

ಭಾರತಿರಾಜ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಭಾರತೀಯ ಸಿನಿರಂಗಕ್ಕೆ ಇದು ತುಂಬಲಾರದ ನಷ್ಟವಾಗಿದೆ ಎಂದು ಶೋಕ ಸಂದೇಶಗಳಲ್ಲಿ ತಿಳಿಸಿದ್ದಾರೆ.

Key words: Veteran, Tamil, film director, Bharathiraja, passes away