ಶಿವಮೊಗ್ಗ,ಸೆಪ್ಟಂಬರ್,3,2025 (www.justkannada.in): ಭೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಅಧ್ಯಕ್ಷ ರವಿಕುಮಾರ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ.
ಈ ಕುರಿತು ಮಾತನಾಡಿರುವ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ರವಿಕುಮಾರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ. ಸಿಎಂ ಮತ್ತು ಡಿಸಿಎಂ ನಿರ್ಧಾರಕ್ಕೆ ನಾನು ಬದ್ದ ಎಂದಿದ್ದಾರೆ.
ಕಮಿಷನ್ ಆರೋಪದ ಬಗ್ಗೆ ತನಿಖೆಯಾಗಬೇಕು. ಎಐ ತಂತ್ರಜ್ಞಾನ ಬಳಕೆ ಮಾಡಿ ಕೆಲ ಸಂಗತಿಗಳನ್ನ ತಿರುಚಿದ್ದಾರೆ. ಇದು ನನ್ನ ವಿರುದ್ದ ಮಾಡಿರುವ ಷಡ್ಯಂತ್ರ ನಿಗಮದಲ್ಲಿ ಎಲ್ಲಾ ಕೆಲಸಗಳನ್ನ ಪಾರದರ್ಶಕವಾಗಿ ಮಾಡಿದ್ದೇನೆ ಅದಕ್ಕಾಗಿ ನನ್ನ ವಿರುದ್ದ ಷಡ್ಯಂತ್ರ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಒತ್ತಾಯ ಮಾಡುತ್ತೇನೆ ಎಂದು ರವಿ ಕುಮಾರ್ ತಿಳಿಸಿದರು.
Key words: CM, DCM, Bhovi Development Corporation, resign