ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಅಭ್ಯರ್ಥಿ: ಅಮಿತ್ ಶಾ ಘೋಷಣೆ

ಬೆಂಗಳೂರು. ನವೆಂಬರ್ 15, 2022 (www.justkannada.in): ಗುಜರಾತ್‌ನಲ್ಲಿ ಬಿಜೆಪಿ ಬಹುಮತ ಪಡೆದರೆ, ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಿಜೆಪಿ ನಾಯಕ ಅಮಿತ್ ಶಾ ಘೋಷಿಸಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತವರು ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಗದ್ದುಗೆ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ.

ಭೂಪೇಂದ್ರ ಪಟೇಲ್ ಅವರು 2021ರಲ್ಲಿ ಗುಜರಾತ್ ಸಿಎಂ ಆಗಿ ನೇಮಕಗೊಂಡಿದ್ದರು. ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಇಸುದನ್ ಗಧ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ ಕಾಂಗ್ರೆಸ್ ಮಾತ್ರ ಸಿಎಂ ಅಭ್ಯರ್ಥಿಯನ್ನು ಘೋಷಿಸದಿರಲು ನಿರ್ಧರಿಸಿದೆ.