ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ಮಹಿಳೆ ಸಜೀವ ದಹನ….

ಬೀದರ್, ಡಿ,5,2019(www.justkannada.in):  ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮಹಿಳೆ ಸಜೀವದಹನವಾಗಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನೀರ್ಣಾ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಹೈದರಬಾದ್ ಮೂಲದ ಕಳ್ಯಾಣಿ ಮೃತಪಟ್ಟ ಮಹಿಳೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ತಗುಲಿದೆ. ಕಾರಿನಲ್ಲಿದ್ದವರು ಮಹಾರಾಷ್ಟ್ರದ ಲಾತೂರ್ ನಿಂದ ಹೈದರಾಬಾದ್ ಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: bidar- fire – moving car-Woman- burned- alive.