ನವದೆಹಲಿ,ಜುಲೈ,31,2023(www.justkannada.in):  ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.![]()
2013ರಿಂದ 2018ರವರೆಗಿನ ಡಿ.ಕೆ ಶಿವಕುಮಾರ್ ಆದಾಯ ಗಳಿಕೆ ಬಗ್ಗೆ ತನಿಖೆ ಸಿಬಿಐ ತನಿಖೆ ನಡೆಸುತ್ತಿದ್ದು ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.  ಹೈಕೋರ್ಟ್ ಆದೇಶ ಪ್ರಶ್ನಿಸಿ  ತಡೆಯಾಜ್ಞೆ ತೆರವಿಗೆ ಮನವಿ ಮಾಡಿ ಸುಪ್ರೀಂಕೋರ್ಟ್ ಗೆ  ಸಿಬಿಐ ಅರ್ಜಿ ಸಲ್ಲಿಸಿತ್ತು.
ಇದೀಗ ಸಿಬಿಐ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ್ದು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶವಿಲ್ಲ ಎಂದು ತಿಳಿಸಿದೆ.
Key words: Big relief – DCM- DK Shivakumar-Supreme Court -dismissed – CBI- petition.
            






