Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್..

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್..

ನವದೆಹಲಿ,ಮೇ,17,2023(www.justkannada.in):  ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಇತ್ತ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ತಡೆಯಾಜ್ಞೆ ತೆರವಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿತು. ಆದರೆ ಇಂದು ಯಾವುದೇ ಮಧ್ಯಂತರ ಆದೇಶ ನೀಡಲು  ಸುಪ್ರೀಂಕೋರ್ಟ್ ನಿರಾಕರಿಸಿದ್ದು, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಸಿಬಿಐಗೆ  ಸುಪ್ರೀಂಕೋರ್ಟ್ ಪೀಠ ಸೂಚಿಸಿದೆ.

ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ ತಿಂಗಳಿಗೆ ಮುಂದೂಡಿದೆ. ಇದರಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ...

ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

Key words: Big relief – KPCC president- DK Shivakumar.