ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ದೊಡ್ಡ ಕ್ರಾಂತಿ- ಶಾಸಕ ಯತ್ನಾಳ್ ಭವಿಷ್ಯ.

ವಿಜಯಪುರ, ಡಿಸೆಂಬರ್​​ 23,2023(www.justkannada.in): ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಭವಿಷ್ಯವೊಂದನ್ನ ನುಡಿದಿದ್ದಾರೆ.

ಲೋಕಸಭೆ ಚುನಾವಣೆ ನಂತರ  ಬಿಜೆಪಿಯಲ್ಲಿ ದೊಡ್ಡ ಕ್ರಾಂತಿ ಆಗಲಿದೆ. ವಂಶವಾದ, ಭ್ರಷ್ಟಾಚಾರ, ಹೊಂದಾಣಿಕೆ ರಾಜಕೀಯ ಖತಂ ಆಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಗೆದ್ದ ಮೇಲೆ ವಂಶವಾದ, ಭ್ರಷ್ಟಾಚಾರ, ಹೊಂದಾಣಿಕೆ ಮೂರು ಖತಂ ಮಾಡುತ್ತಾರೆ. ಸುಮ್ಮನೆ ಅಲ್ಲಿಯವರೆಗೂ ಜಗ್ಗುತ್ತಾರೆ ಅಷ್ಟೇ ಎಂದು ತಿಳಿಸಿದರು.

ಹಿಜಾಬ್ ನಿಷೇಧ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಪಾರ್ಟ್-2 ಆಗಿದ್ದಾರೆ. ಸಿದ್ದರಾಮಯ್ಯ ಅತಿಯಾಗಿ ಆಡುತ್ತಿದ್ದಾರೆ, ಅಂತ್ಯ ಕಾಲ ಬಂದಿದೆ ಅನ್ನಿಸುತ್ತೆ. ಈ ರೀತಿ ತುಷ್ಟೀಕರಣ ಮಾಡಿಯೇ ನಮ್ಮ ದೇಶ ಹಾಳಾಗಿದೆ ಎಂದು ವಾಗ್ದಾಳಿ ನಡೆಸಿದರು.

Key words: Big- revolution -BJP -after – Lok Sabha -elections – MLA Basanagowda patil Yatnal