ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ಶಾಕ್: ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹ.

ನವದೆಹಲಿ,ಮಾರ್ಚ್,24,2023(www.justkannada.in)  ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಹಿನ್ನೆಲೆ ಲೋಕಸಭಾ ಸದಸ್ಯತ್ವದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಅನರ್ಹಗೊಳಿಸಿ  ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್  ಆದೇಶ ಹೊರಡಿಸಿದ್ದಾರೆ.

ಈ ಮೂಲಕ ರಾಹುಲ್ ಗಾಂಧಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ನಿನ್ನೆ ತೀರ್ಪು ನೀಡಿತ್ತು.

ಇದೀಗ ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಹಿನ್ನೆಲೆ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಲಾಗಿದೆ.

Key words: Big shock – Congress leader -Rahul Gandhi- Disqualified -Lok Sabha –member