ನವದೆಹಲಿ, ಅಕ್ಟೋಬರ್,6,2025 (www.justkannada.in): ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ಈ ಕುರಿತು ನವದೆಹಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಘೋಚಣೆ ಮಾಡಿದರು.
ಒಟ್ಟು 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 6 ರಂದು ಮೊದಲ ಹಂತದ ಮತದಾನ, ನವೆಂಬರ್ 11 ರಂದು 2ನೇ ಹಂತದ ಮತದಾನ ನಡೆಯಲಿದ್ದು ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಹಾರದಲ್ಲಿ 7.43 ಕೋಟಿ ಮತದಾರರು ಇದ್ದಾರೆ ಎಂದು ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದರು.
Key words: Bihar Assembly elections, Dates, announced