ಬೆಂಗಳೂರು,ಜೂನ್,13,2026 (www.justkannada.in): ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ ಈ ಘಟನೆ ನಡೆದಿದೆ. ಕೇರಳ ಮೂಲದ ಅತುಲ್ ಹಾಗೂ ಗೌರಿಶಂಕರ್ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿಗಳು.
ಮೈಸೂರು ನಿಂದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರು ಕಡೆಗೆ ಬರುತ್ತಿದ್ದರು. ಈ ಮಧ್ಯೆ ಮಧ್ಯರಾತ್ರಿ 2 ಗಂಟೆ ವೇಳೆಗೆ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ ಬಳಿ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Key words: Bike accident, Two, nursing, students, die






