Monday, October 19, 2026

Dasara Wishes

Happy Dasara
Home Crime ಭೀಕರ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು: ಸರ್ಕಾರಿ ಬಸ್ ಬೆಂಕಿಗಾಹುತಿ.

ಭೀಕರ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು: ಸರ್ಕಾರಿ ಬಸ್ ಬೆಂಕಿಗಾಹುತಿ.

ವಿಜಯಪುರ,ಜನವರಿ,10,2024(www.justkannada.in):ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ, ಬಸ್ ಗೆ ಬೆಂಕಿ ತಗುಲಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿದೆ.  ಬೆಂಕಿ ಹೊತ್ತಿಕೊಂಡ ಬೆನ್ನಲ್ಲೆ ಪ್ರಯಾಣಿಕರು ಬಸ್ ನಿಂದ ಇಳಿದಿದ್ದು ಅಪಾಯದಿಂದ ಪಾರಾಗಿದ್ದಾರೆ.ಭೀಕರ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು: ಸರ್ಕಾರಿ ಬಸ್ ಬೆಂಕಿಗಾಹುತಿ ac...

ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು, ಸಿಂದಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Bike –bus-accident- rider -dies