ಡಿವೈಡರ್ ಗೆ ಬೈಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಯುವಕರು ದುರ್ಮರಣ…

ಬೆಂಗಳೂರು,ಮೇ,5,2019(www.justkannada.in): ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಕುಣಿಗಲ್ ನಿವಾಸಿ ಅನಿಲ್, ಟಿ ನರಸಿಪುರದ ಕಾರ್ತಿಕ್ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರು ಶ್ರೀನಾಥ್ ಮೃತಪಟ್ಟ ಯುವಕರು.  ನಿನ್ನೆ ರಾತ್ರಿ  ಮೂವರು ಯುವಕರು ಬಸವೇಶ್ವರ ನಗತರದ ಪವಿತ್ರ ಪ್ಯಾರಡೈಸ್ ನಿಂದ  ಮಾಗಡಿ ರಸ್ತೆ ಕಡೆ ಹೋಗುತ್ತಿದ್ದರು. ಬೈಕ್ ವೇಗವಾಗಿ ಚಲಾಯಿಸುತ್ತಿದ್ದ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಗುರುವಾರ ಮೃತಯುವಕ ಅನಿಲ್ ನ ಎಂಗೇಜ್ ಮೆಂಟ್ ಇತ್ತು. ಈ ಕುರಿತು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Bike -collide – divider- Three -young men –dead- bangalore