ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಬಲಿ: ಕುಟುಂಬಸ್ಥರಿಂದ ಆಕ್ರೋಶ.

ಬೆಂಗಳೂರು,ಅಕ್ಟೋಬರ್,5,2023(www.justkannada.in):  ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ನಗರದ ಅಟ್ಟೂರು ಬಳಿಯ  ಮದರ್ ಡೈರಿ ಸಮೀಪ ಈ ಘಟನೆ ನಡೆದಿದೆ.  ಭರತ್ ರೆಡ್ಡಿ(23) ಮೃತಪಟ್ಟ ಬೈಕ್ ಸವಾರ. ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಡಿಕ್ಕಿಯಾಗಿದೆ. ಇನ್ನು ಘಟನೆ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಕುರಿತು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಬಗ್ಗೆ ಭರತ್ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭರತ್ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸುವವನಲ್ಲ. ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕರ ಬೇಜವಾಬ್ದಾರಿಗೆ ಇನ್ನೆಷ್ಟು ಬಲಿ ಬೇಕು ಎಂದು ಕಿಡಿಕಾರಿದ್ದಾರೆ.

Key words: Bike rider –death- BMTC -bus –collision