ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು….

ಬೆಂಗಳೂರು,ಜ,23,2020(www.justkannada.in):  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಹಿಂಬದಿಯಿಂದ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ಸುಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾಯಲ್ ಎನ್ ಫಿಲ್ಡ್ ಬೈಕ್ ಸವಾರ ಶಿವಕುಮಾರ್ ಮೃತಪಟ್ಟ ವ್ಯಕ್ತಿ. ಶಿವಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಬಸ್ ಡಿಕ್ಕಿ ರಭಸಕ್ಕೆ ಬೈಕ್ ಟೆಂಪೋಗೆ ಡಿಕ್ಕಿ ಹೊಡೆದು ಬೈಕ್ ಸವಾರ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಘಟನೆ ನಡೆಯುತ್ತಿದ್ದಂತೆ ಬಿಎಂಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Bike rider –death-BMTC bus -collision