Friday, August 14, 2026

BDA Apartments

Home Front Page ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ:  ಬಿಸಿಯೂಟ ಕಾರ್ಯಕರ್ತೆಯರಿಂದ ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ:  ಬಿಸಿಯೂಟ ಕಾರ್ಯಕರ್ತೆಯರಿಂದ ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನ.

ಬೆಂಗಳೂರು,ಫೆಬ್ರವರಿ,15,2023(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ  ಬಿಸಿಯೂಟ ಕಾರ್ಯಕರ್ತೆಯರು ಇಂದು  ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಫ‍್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಬ್ಯಾರಿಕೇಡ್ ತಳ್ಳಿ ವಿಧಾನಸೌಧಕ್ಕೆ ಮುತ್ತಿಗೆಗೆ ಮುಂದಾದ ಪ್ರತಿಭಟನಾನಿರತ ಕಾರ್ಯಕರ್ತೆಯರನ್ನ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಬೇರೆಡೆಗೆ ಸ್ಥಳಾಂತರಿಸಿದರು.

Key words:  Bisyuta worker- protest-Vidhana Soudha