ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ವ್ಯಂಗ್ಯವಾಗಿ ತಿರುಗೇಟು: ಸಿದ್ಧರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ.

ಮೈಸೂರು,ನವೆಂಬರ್,11,2021(www.justkannada.in): ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಂಸದ ಪ್ರತಾಪ್  ಸಿಂಹ, ಸದಾಶಿವನಗರದಲ್ಲಿ ನಾಲ್ಕು ಭವ್ಯ ಬಂಗಲೇ, ಒಂದೇ ನಂಬರ್‌ನ ಕಾರು. ನಾನು ನಿರ್ಗತಿಕ, ಶೋಷಣೆ ಒಳಗಾದವರು ಎಂದು ಹೇಳಿಕೊಳ್ಳುವವರಿಗೆ ಹೆಚ್ಚಿನ ಮನ್ನಣೆ ನೀಡುವ ಅಗತ್ಯ ಇಲ್ಲ. ಪ್ರಿಯಾಂಕ್ ಖರ್ಗೆ ಅವರಿಗೆ ಮೆಚ್ಯುರಿಟಿ ಇದೆಯೋ ಇಲ್ಲವೋ ಎಂಬುದು ನೀವೇ ತೀರ್ಮಾನ ಮಾಡಿಕೊಳ್ಳಿ ನಾನು ಹೇಳುವುದಿಲ್ಲ ಎಂದು ಲೇವಡಿ ಮಾಡಿದರು.

ಚಾರ್ಜ್ ಶೀಟ್‌ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರೆ ಉಲ್ಲೇಖ ಆಗಿದೆ.

ಬಿಟ್ ಕಾಯಿನ್‌ ವಿಚಾರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣ ಜಾಮೀನು ಹಾಕುತ್ತಿದೆ. ಈ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ, ಕಾಂಗ್ರೆಸ್‌ನವರೇ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್‌ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರೆ ಉಲ್ಲೇಖ ಆಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಬಂದೆ ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ರಫೇಲ್ ವಿಚಾರದಲ್ಲೂ ಕಾಂಗ್ರೆಸ್ ನ ಅವ್ವ ಮಗ ಹೀಗೆ ಮಾಡಿದರು. ತಾವು ಡೀಲ್ ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಈಗ ಅವರ ಡೀಲ್ ಬಯಲಾಗಿದೆ. ರಾಜ್ಯದಲ್ಲೂ ಅದೇ ತಂತ್ರವನ್ನ ಕಾಂಗ್ರೆಸ್ ಪ್ರಯೋಗಿಸುತ್ತಿದೆ. ಈ ಪ್ರಕರಣವು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ.ಇದರಿಂದ ಕಾಂಗ್ರೆಸ್ ಬಿಜೆಪಿ ಮೇಲೆ ಮೊದಲೇ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಮಹಾನ್ ಆರ್ಥಿಕ ತಜ್ಞರು. ಬಿಟ್ ಕಾಯಿನ್ ಎಂದರೇನು.? ಅದರ ವ್ಯವಹಾರ ಹೇಗಿರತ್ತೆ.? ಅದನ್ನ ನಮ್ಮಂತವರಿಗೆ ವಿವರಿಸಲಿ. ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ ನಮಗಿದೆ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ.ಬೊಮ್ಮಾಯಿ ಅವರ ಯಶಸ್ವಿ ಆಡಳಿತ ಸಹಿಸದೆ ಹೀಗೆ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಮದಕರಿ ನಾಯಕನಿಗೆ ವಿಷ ಹಾಕಿ ಕೊಂದ ಟಿಪ್ಪು ಜಯಂತಿ ಮಾಡಿದ್ದು ನಿಮ್ಮ ಸಾಧನೆ-ಪ್ರತಾಪ್ ಸಿಂಹ ಟೀಕೆ.

ಬೊಮ್ಮಾಯಿ ಅವರು ಒನಕೆ ಓಬ್ಬವ ಜಯಂತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ನೀವು ಮಾಡಿದ್ದೇನು..? ಓಬವ್ವನಂತ ವೀರ ವನಿತಾ ಮಹಿಳೆಯನ್ನು ಮೋಸದಿಂದ ಕೊಂದ. ಹೈದರಾಲಿಯ ಮಗನ ಜಯಂತಿಯನ್ನ ನೀವು ಮಾಡಿದ್ರಿ. ಮೈಸೂರು ಮಹಾರಾಜರಿಗೆ ಮೋಸ ಮಾಡಿದ ಟಿಪ್ಪುವಿನ ಜಯಂತಿ ನೀವು ಮಾಡಿದಿರಿ. ಮದಕರಿ ನಾಯಕನಿಗೆ ವಿಷ ಹಾಕಿ ಕೊಂದ ಟಿಪ್ಪು ಜಯಂತಿ ಮಾಡಿದ್ದು ನಿಮ್ಮ ಸಾಧನೆ. ನಿಮ್ಮಿಂದ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿ ಪಾಠ ಕಲಿಯಬೇಕಾಗಿಲ್ಲ‌ ಎಂದು ಕಿಡಿಕಾರಿದರು.

ಬೊಮ್ಮಾಯಿ ಅವರೇ 2023ಕ್ಕೂ ಮುಖ್ಯಮಂತ್ರಿ ಆಗೋದು ಖಚಿತವಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಮ್ಮನ್ನೆ ಸೋಲಿಸಿದವರನ್ನು‌, ನೀವೆ ಮನಸಾರೆ ಹಾಡಿ ಹೊಗಳುವ ಪರಿಸ್ಥಿತಿ ಬಂದಿದೆ. ಬೊಮ್ಮಾಯಿ ಅವರು ನೂರು ದಿನಗಳಲ್ಲಿ ಜನರ‌ ಮನೆ ಮನ ತಲುಪಿದ್ದಾರೆ. ಉಪ ಚುನಾವಣೆಯಲ್ಲಿನ ಒಂದು ಸೋಲಿಗೆ ಬೇರೆ ಬೇರೆ ಕಾರಣ ಇರುತ್ತವೆ. ಅದು ರಾಜಕೀಯದ ಏಟು, ಒಳ ಏಟು, ತಂತ್ರ ಎಲ್ಲವು ಇರುತ್ತೆ. ನಂಜನಗೂಡು ಗುಂಡ್ಲುಪೇಟೆಯಲ್ಲಿ ಗೆದ್ದ ಕಾಂಗ್ರೆಸ್.ಮುಂದಿನ ಚುನಾವಣೆಯಲ್ಲಿ ಏನಾಯ್ತು, ನೀವು ಏನಾದ್ರಿ..? ಬೊಮ್ಮಾಯಿ ಅವರೇ 2023ಕ್ಕು ಮುಖ್ಯಮಂತ್ರಿ ಆಗೋದು ಖಚಿತವಾಗಿದೆ. ಹಾಗಾಗಿ ಬೊಮ್ಮಾಯಿ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದೀರಿ. ಮೊದಲು ಈ ರೀತಿ ತಂತ್ರಗಾರಿಕೆಯನ್ನ ಮಾಡೋದು ಮೊದಲು ಬಿಡಿ ಎಂದು ಸಂಸದ ಪ್ರತಾಪ್ ಸಿಂಹ ಹರಿಹಾಯ್ದರು.

key words: BitCoin-issue-MP- Pratap Simha- against –former CM-Siddaramaiah.

ENGLISH SUMMARY…

MP Pratap Simha ridicules Cong. MLA Priyank Kharge’s comments over Bitcoin case
Mysuru, November 11, 2021 (www.justkannada.in): Mysuru-Kodagu MP Pratap Simha today ridiculed the comments of Congress MLA Priyank Kharge over the Bitcoin case that is making rounds in the State.
Speaking in Mysuru today, the MP Pratap Simha sarcastically said, “There is no need to give importance to the comments of a person who owns four posh bungalows in Sadashivanagar, Bengaluru, same number luxury cars, etc. Despite, this he claims he is poor and downtrodden. You decide whether he has the maturity or not.”
In his response to Congress leaders’ allegations about the involvement of BJP leaders in the Bitcoin case, he sarcastically said that Congress is applying for an anticipatory bail through the media. “If a serious investigation is conducted over this issue, the Congress leaders will be losers. There are names of the children of several Congress leaders in the charge sheet. That is why they are scared and are applying for anticipatory bail,” he ridiculed.
Keywords: MP Pratap Simha/ Bitcoin case/ ridicules