ಕನ್ನಡ ಧ್ವಜಕ್ಕೆ ಬೆಂಕಿ‌ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು: ಬಿಜೆಪಿ ಆರೋಪ

ಬೆಂಗಳೂರು, ಡಿಸೆಂಬರ್ 19, 2021 (www.justkannada.in): ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ‌ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ನಡೆಸಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಎಂದು ಕಮಲ ನಾಯಕರು ದೂರಿದ್ದಾರೆ.

ಕೃತ್ಯ, ಉದ್ದೇಶ ಹಾಗೂ ಹಿಂದಿರುವ ಶಕ್ತಿಗಳು ಕಾಂಗ್ರೆಸ್ಸಿಗರೇ ಎನ್ನುವ ಸಂಶಯ ರಾಜ್ಯದ ಜನತೆಯನ್ನು‌ ಕಾಡುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿರುವ ಬಿಜೆಪಿ, ಇದರ ಹಿಂದೆ ಕೈ ನಾಯಕರ ಕೈವಾಡವಿದೆ ಎಂದು ಟೀಕಿಸಿದೆ.