ಕಂಗನಾ ವಿರುದ್ಧ ಕಿಡಿಕಾರಿದ ಬಿಜೆಪಿ, ಕಾಂಗ್ರೆಸ್

ಬೆಂಗಳೂರು, ನವೆಂಬರ್ 13, 2021 (www.justkannada.in): 1947ರಲ್ಲಿ ಭಾರತಕ್ಕೆ ಲಭಿಸಿದ್ದು ಸ್ವಾತಂತ್ರ್ಯವಲ್ಲ, ಭಿಕ್ಷೆ ಎಂದಿದ್ದ ಕಂಗನಾ ವಿರುದ್ಧ ಬಿಜೆಪಿ ತಿರುಗಿಬಿದ್ದದೆ. ಪದ್ಮ ಪ್ರಶಸ್ತಿ ಹಿಂಪಡೆಯಲು ಕಾಂಗ್ರೆಸ್ ಆಗ್ರಹಿಸಿದೆ.

ದೆಹಲಿ ಬಿಜೆಪಿಯ ವಕ್ತಾರರು ಕಂಗನಾ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಎಎಪಿ ಹಾಗೂ ಕಾಂಗ್ರೆಸ್ ಪಕ್ಷಗಳೂ ಕಂಗನಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ.

ಬಾಲಿವುಡ್ ನಟಿ ಕಂಗನಾ ರಣಾವತ್ ನೀಡಿದ್ದ ಸ್ವಾತಂತ್ರ್ಯದ ಕುರಿತ ಹೇಳಿಕೆಗೆ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದೆ. ಪದ್ಮ ಪ್ರಶಸ್ತಿ ಹಿಂಪಡೆಯಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಕಂಗನಾ ಹೇಳಿಕೆಯನ್ನು ವಿರೋಧಿಸಿದ್ದಾರೆ. ಕಂಗನಾ ಅವರ ಹೇಳಿಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಬಹುದೊಡ್ಡ ದುರುಪಯೋಗ ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ.

ಬಿಜೆಪಿ ಸಂಸದ ವರುಣ್ ಗಾಂಧಿ ಕೂಡ ಕಂಗನಾ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ್ದರು. ‘ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಕಂಗನಾ ತಿರಸ್ಕರಿಸಿದ್ದಾರೆ. ಈ ಆಲೋಚನೆಗೆ ಹುಚ್ಚುತನ‌ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದಾರೆ.