Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ

ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ

ರಾಯಚೂರು,ಸೆಪ್ಟಂಬರ್,1,2026 (www.justkannada.in): ವಾಲ್ಮೀಕಿ ನಿಗಮದ ಅಕ್ರಮದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ  ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಚಾಲನೆ ದೊರೆಯಿತು.

ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿವರೆಗೆ 175 ಕಿ.ಮೀ ವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕಹಳೆ ಊದುವ ಮೂಲಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ ಇತರೆ ನಾಯಕರು ಚಾಲನೆ ನೀಡಿದರು.ಬಿಜೆಪಿಯ ‘ಬಳ್ಳಾರಿ ಚಲೋ’ bjp

ವಾಲ್ಮೀಕಿ ನಿಗಮದ 187 ಕೋಟಿ ರೂ ವಾಪಸ್ ಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿದೆ. 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ jk02_new jk02 new

ಚಾಲನೆ ಬಳಿಕ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಜನಾಕ್ರೋಶಕ್ಕೆ  ಮಣಿದು ಬಿ.ನಾಗಂದ್ರ ರಾಜೀನಾಮೆ ನೀಡಿದ್ದಾರೆ.  ಈ ಸರ್ಕಾರ ಅಧಿಕಾರ ಬಿಟ್ಟು ತೊಲಗುವವರೆಗೂ ಹೋರಾಟ ಮಾಡುತ್ತೇವೆ. ಈ ಸರ್ಕಾರ ಮನೆಗೆ ಹೋಗುವವರೆಗೂ ಪಾದಯಾತ್ರ ನಡೆಯುತ್ತದೆ.  ಸಿಎಂ ಇನ್ನಾದರೂ ಅಭಿವೃದ್ದಿ ಕಡೆ ಗಮನಹರಿಸಲಿ ಎಂದು ಹೇಳಿದರು.

Key words: BJP, ‘Bellari Chalo,  march,  launch, Raichur, BS Yeddyurappa