ಕೊಪ್ಪಳ,ಮೇ,28,2026 (www.justkannada.in): ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಯಾರೇ ಮುಖ್ಯಮಂತ್ರಿಯಾದರೂ ಕರ್ನಾಟಕ ಅಭಿವೃದ್ದಿಯಾಗಲ್ಲ. ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ ಎಂದು ಕಿಡಿಕಾರಿದರು.
ಸಿಎಂ ಯಾರಾ ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಯಾರೇ ಸಿಎಂ ಆದರೂ ರಾಜ್ಯದಲ್ಲಿ ಅಭಿವೃದ್ದಿ ಆಗಲ್ಲ. ರಾಜ್ಯದ ಪರಿಸ್ಥಿತಿ ಬಗ್ಗೆ ನಾವು ತಲೆಕೆಡಿಸಿಕೊಂಡಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: Karnataka, not develop, becomes, CM, BJP, BY Vijayendra







