Saturday, August 15, 2026

BDA Apartments

Home Front Page ಆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ- ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್.

ಆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ- ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್.

ರಾಮನಗರ,ಮಾರ್ಚ್,29,2024 (www.justkannada.in): ನಿನ್ನೆ  ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸುವ ಮುನ್ನ  ಕಾಂಗ್ರೆಸ್ ನಾಯಕರಿಂದ ಶಕ್ತಿ ಪ್ರದರ್ಶನ ನಡೆದ  ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್, ಆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ. ಮತಪತ್ರದಲ್ಲಿ ಶಕ್ತಿ ಪ್ರದರ್ಶನ ಇರಬೇಕು. ಕೆಲವೆಡೆ ಏಕಾಂಗಿಯಾಗಿ ನಾಮಪತ್ರ ಸಲ್ಲಿಸಿದವರು ಗೆದ್ದಿದ್ದಾರೆ ಎಂದು ಹೇಳಿದರು.

 ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್, ಏಪ್ರಿಲ್ 4ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ . ಎರಡೂ ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎರಡು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಇದ್ದಾರೆ ಎಂದರು.

ನನ್ನ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಆದರೆ ಅವರೇನು ವೈದ್ಯರಲ್ಲ. ಇರಲಿ ನಾನು ಯಾರ ಬಗ್ಗೆಯೂ ವಿರೋಧವಾಗಿ ಮಾತನಾಡುವುದಿಲ್ಲ. ಬಿಜೆಪಿಯಿಂದ ಸ್ಪರ್ಧಿಸಿದ್ದೇನೆ ಇದರಿಂದ ಯಾವುದೇ ರೀತಿಯಾದಂತಹ ಗೊಂದಲ ಉಂಟಾಗುವುದಿಲ್ಲ ಎಂದರು.

Key words:  BJP, candidate, CN Manjunath