ಏ.6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಕೇಂದ್ರಸಚಿವ ಪ್ರಹ್ಲಾದ್ ಜೋಶಿ.

ಬೆಳಗಾವಿ,ಮಾರ್ಚ್,31,2023(www.justkannada.in):  ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಕೇಂದ್ರಸಚಿವ ಪ್ರಹ್ಲಾದ್ ಜೋಶಿ, ಪಕ್ಷದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಏಪ್ರಿಲ್ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಹ್ಲಾದ್ ಜೋಶಿ,  ಗ್ಯಾರಂಟಿ ಕಾರ್ಡ್ ತೋರಿಸಿ ಕಾಂಗ್ರೆಸ್ ಸುಳ್ಳು ಆಶ‍್ವಾಸನೆ ನೀಡುತ್ತಿದೆ. ಕಾಂಗ್ರೆಸ್ ಸುಳ್ಳು ಆಶ‍್ವಾಸನೆಗಳನ್ನ ಜನ ನಂಬುವುದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: BJP -candidate – released – 6th or 7th – Union Minister -Prahlad Joshi.