Tuesday, August 18, 2026

BDA Apartments

Home Front Page ಯದುವೀರ್ ‘ರೇಡಿಯೋ ಮಿರ್ಚಿ’: ಚುನಾವಣಾ ಆಯೋಗದ ಮೆಟ್ಟಿಲೇರಿದ ಕಾಂಗ್ರೆಸ್

ಯದುವೀರ್ ‘ರೇಡಿಯೋ ಮಿರ್ಚಿ’: ಚುನಾವಣಾ ಆಯೋಗದ ಮೆಟ್ಟಿಲೇರಿದ ಕಾಂಗ್ರೆಸ್

ಮೈಸೂರು,ಮಾರ್ಚ್,25,2024(www.justkannada.in): ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ  ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ.

ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ.

ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ  ಮಾತನಾಡುವುದರಲ್ಲಿ ತಪ್ಪಿಲ್ಲ. ಆದರೆ ದಿನಾಂಕ 26.04.2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ  ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಮನವಿ ಮಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಇತ್ತೀಚೆಗೆ ನಟ ಶಿವರಾಜ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ ನೀಡುವಂತೆ ಬಿಜೆಪಿ ಯುವ ಮೋರ್ಚಾ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಇದೇ ಅಸ್ತ್ರವನ್ನೇ ಹೆಚ್.ಎ ವೆಂಕಟೇಶ್ ಪ್ರಯೋಗಿಸಿದ್ದಾರೆ.

Key words: BJP –candidate- Yaduveer –against- H.A. Venkatesh-complaint