ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ದೂರು..

ಕಲ್ಬುರ್ಗಿ,ಮೇ,16,2019(www.justkannada.in): ಚಿಂಚೋಳಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪ್ರಚಾರಕ್ಕೆ ಪೊಲೀಸ್ ಪೈಲೆಟ್ ವಾಹನ ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ  ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಮತ್ತು ಶಾಸಕ ಪಿ.ರಾಜೀವ್ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.  ಕಾಂಗ್ರೆಸ್ ಪರ ಪೊಲೀಸ್ ಪೈಲೆಟ್ ವಾಹನ ಸಿಬ್ಬಂದಿ ಪ್ರಚಾರ ಮಾಡುತ್ತಿದ್ದಾರೆ. ಪೊಲೀಸ್ ವಾಹನದಲ್ಲಿ ಹಣ ಸಾಗಾಟ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸರ ವಾಹನ ತಪಾಸಣೆ ಮಾಡುವಂತೆ ಚುನಾವಣಾಧಿಕಾರಿಗೆ ಮನವಿ ಮಾಡಿದ್ದಾರೆ.

Key words:BJP –complains- against- Mallikarjun Kharge – Priyank Kharge.