Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ರಾಜ್ಯ ಸರ್ಕಾರ ವಜಾಗೊಳಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು.

ರಾಜ್ಯ ಸರ್ಕಾರ ವಜಾಗೊಳಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು.

ಬೆಂಗಳೂರು,ಫೆಬ್ರವರಿ,29,2024(www.justkannada.in): ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಈವರೆಗೆ ಬಂಧಿಸಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ. ಹೀಗಾಗಿ ರಾಜ್ಯ ಸರ್ಕಾರವನ್ನ ವಜಾಗೊಳಿಸುವಂತೆ ಆಗ್ರಹಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿತು.

ವಿಧಾನಸಭೆ ಕಲಾಪದಲ್ಲಿ ಸಭಾತ್ಯಾಗ ಮಾಡಿ ಹೊರ ಬಂದ ಬಿಜೆಪಿ ಶಾಸಕರು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.ರಾಜ್ಯ ಸರ್ಕಾರ ವಜಾಗೊಳಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು bjp comp

ಪಾಕ್ ಪರ ಘೋಷಣೆ ಕೂಗಿದವರನ್ನ ಈವರೆಗೆ ಬಂಧಿಸಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಸರ್ಕಾರವನ್ನ ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

Key words: BJP -complains – governor – dismissal – state government.