ಚುನಾವಣೆಯಲ್ಲಿ ಬಿಜೆಪಿ ಸೋಲು: ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ ಸಂಸದ ಪ್ರತಾಪ್ ಸಿಂಹ.

ಮೈಸೂರು,ಮೇ,19,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಬಳಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕ್ಷಮೆಯಾಚಿಸಿದ್ದಾರೆ.

ಸಾಮಾಜಿಕ ಜಾಲತಾಣಧ ಮೂಲಕ ಕ್ಷಮೆಯಾಚನೆ ಮಾಡಿರುವ ಸಂಸದ ಪ್ರತಾಪ್ ಸಿಂಹ,  ಕ್ಷೇತ್ರಗಳಲ್ಲಿ ನಮ್ಮ ಪರವಾಗಿ ಮತ ಕೇಳುವುದು ಕಾರ್ಯಕರ್ತರು. ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವುದು ಕಾರ್ಯಕರ್ತರು. ಸೋತಾಗ ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ತಿಳಿಸಿದ್ದಾರೆ.

ಮೇ 10ರಂದು ರಾಜ್ಯದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆದು ಮೇ 13 ರಂದು ಫಲಿತಾಂಶ ಪ್ರಕಟವಾಯಿತು. ಕಾಂಗ್ರೆಸ್ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಬಹುಮತ ಹೊಂದಿ ಸರ್ಕಾರದ ರಚನೆಗೆ ಸಜ್ಜಾಗಿದೆ. ಇತ್ತ 66 ಸ್ಥಾನಗಳನ್ನ ಪಡೆದು ಸೋಲನುಭವಿಸಿದ ಬಿಜೆಪಿ ವಿಪಕ್ಷದಲ್ಲಿ ಕೂರಲಿದೆ.

Key words: BJP- Defeat – Elections- MP Pratap Simha- Apologizes -Activists.