Wednesday, September 16, 2026

BDA Apartments

ಮುಂದೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ BDA JK...
Home Front Page ಮುಂದೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಮುಂದೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಬೆಂಗಳೂರು, ಆಗಸ್ಟ್ 27, 08,2023 (www.justkannada.in): ಮುಂದಿನ ವಿಧಾನಸಭೆಯಲ್ಲಿ ಬಿಜೆಪಿಗೆ ಸೋಲು ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಮುಂದಿನ ವಿಧಾನಸಭೆಯಲ್ಲಿ ಬಿಜೆಪಿಗೆ ಸೋಲು ಖಚಿತ  ಎಂದು ಖರ್ಗೆ ಹೇಳಿದ್ದಾರೆ.

ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ದಲಿತ ಯುವಕನನ್ನು ಕೊಲೆ ಮಾಡಲಾಗಿದೆ. ಯುವಕನ ತಾಯಿಯನ್ನು ಆ ಗೂಂಡಾಗಳು ಬಿಟ್ಟಿಲ್ಲ. ಬಿಜೆಪಿ ಮಧ್ಯಪ್ರದೇಶವನ್ನು ದಲಿತ ದೌರ್ಜನ್ಯಗಳ ಪ್ರಯೋಗಶಾಲೆಯನ್ನಾಗಿ ಮಾಡಿದೆ ಎಂದು ಆರೋಪಿಸಿದ್ದಾರೆ.

ನರೇಂದ್ರ ಮೋದಿ, ಮಧ್ಯಪ್ರದೇಶದಲ್ಲಿ ದಲಿತ ಹಾಗೂ ಆದಿವಾಸಿಗಳ ಮೇಲಿನ ನಿರಂತರ ದೌರ್ಜನ್ಯದ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಜನರು ಬಿಜೆಪಿಯ ಬಲೆಗೆ ಬೀಳುವುದಿಲ್ಲ. ಕೆಲವೇ ತಿಂಗಳಲ್ಲಿ ಸಮಾಜದ ಶೋಷಿತ ವರ್ಗಗಳ ಸಂಕಟಕ್ಕೆ ತಕ್ಕ ಉತ್ತರ ಸಿಗಲಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟೀಕಿಸಿದ್ದಾರೆ.