ರಾಜ್ಯ ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು.

ಬೆಂಗಳೂರು,ಜನವರಿ,9,2024(www.justkannada.in): ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೈತ ಹಾಗೂ ಕೃಷಿ ಕಾರ್ಮಿಕ ವಿರೋಧಿ ನೀತಿಗಳ ವಿಚಾರ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ  ದೂರು ಸಲ್ಲಿಸಿದೆ.

ಈ ವೇಳೆ ಮಾಜಿ ಸಿಎಂ ಗಳಾದ ಡಿ.ವಿ.ಸದಾನಂದಗೌದ, ಬಸವರಾಜ್ ಬೊಮ್ಮಾಯಿ, ಶಾಸಕ ಡಾ.ಅಶ್ವತ್ಥನಾರಾಯಣ್, ಸಿ.ಕೆ.ರಾಮಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Key words: BJP –delegation-complains – governor -against -state government.