ಮೋಡ ಬಿತ್ತನೆಯಿಂದ ಪ್ರಯೋಜನವಿಲ್ಲ, ಬರ ನಿರ್ವಹಣೆಗೆ ಅಗತ್ಯ ಕ್ರಮ; ಸಿಎಂ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,28,2023(www.justkannada.in): ರಾಜ್ಯದಲ್ಲಿ ಉತ್ತಮ ಮಳೆಯಾಗದೇ ಬರದ ಛಾಯೆ ಆವರಿಸಿರುವ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ಧರಾಮಯ್ಯ, ಮೋಡ ಬಿತ್ತನೆಯಿಂದ ಪ್ರಯೋಜನವಿಲ್ಲ, ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮೂರು ದಿನಗಳ ಮೈಸೂರು ಪ್ರವಾಸ ಹಿನ್ನೆಲೆ  ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹಕ್ಕೆ  ಸಿಎಂ ಸಿದ್ಧರಾಮಯ್ಯ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಸ್ವಾಗತಿಸಿದರು. ಪೊಲೀಸರು ಗೌರವ ವಂದನೆ ಸಲ್ಲಿಕೆ ಮಾಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನ ಇಲ್ಲ. ಬರಕ್ಕೆ ಬೇಕಾದಂತಹ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಬರ ಪೀಡಿತ ಪ್ರದೇಶ ಘೋಷಣೆಯಾದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ದಿವಾಳಿ: ಕಾಂಗ್ರೆಸ್ ಗೆ ಯಾರೇ ಬಂದರೂ ಸ್ವಾಗತ..

ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದ್ದು,  ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.

ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದು 3 ತಿಂಗಳಾಗಿದೆ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನ ಆಯ್ಕೆ ಮಾಡಲು ಆಗಿಲ್ಲ. ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ.  ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ ಪಕ್ಷದ ಸಿದ್ದಾಂತ ತತ್ವ ಒಪ್ಪಿ ಬರುವವರಿಗೆ ಅವಕಾಶವಿದೆ ಎಂದು ತಿಳಿಸಿದರು.

ಪ್ರಧಾನಿ ಬಿಜೆಪಿ ನಾಯಕರನ್ನ ಭೇಟಿ ಮಾಡದ ವಿಚಾರ  ಕುರಿತು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ, ಮೋದಿನೇ ಇವರನ್ನ ಭೇಟಿಗೆ ಬರಬೇಡಿ ಅಂದಿದ್ರಂತೆ ಎಂದು ಲೇವಡಿ ಮಾಡಿದರು.

ಇಂದಿನಿಂದ  ಮೂರು ದಿನ ಮೈಸೂರಿನಲ್ಲಿ ಪ್ರವಾಸ ಮಾಡುತ್ತೇನೆ.  ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುಚೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ.  ರಾಜ್ಯದ ವಿವಿಧೆಡೆಯಂದ ಜನರು ಆಗಮಿಸುವ ನಿರೀಕ್ಷೆ ಇದೆ. ಆಗಸ್ಟ್ 30 ರಂದು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: BJP -Diwali – congress-come-mysore-CM Siddaramaiah.