ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ..?  ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು, ಏಪ್ರಿಲ್, 2 ,2024 (www.justkannada.in):  ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಶ್ನಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,   ಹೈಲೆವೆಲ್ ಕಮಿಟಿ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೋಟೀಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣಾ ಆಯೋಗ ನೀಡಿರುವ ನೋಟೀಸ್ ಗೆ ಉತ್ತರ ನೀಡಲಾಗಿದೆ. ಸಿಬಿಐ ನವರು ನೀಡಿರುವ  ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಿದ್ದೇನೆ ಎಂದರು.

ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ

ವರುಣಾ ಕ್ಷೇತ್ರದ ಮುಖ್ಯಮಂತ್ರಿಗಳ ನಿನ್ನೆಯ ಪ್ರಚಾರ ಭಾಷಣದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಜನಪರ ಯೋಜನೆಗಳು ,ಅಭಿವೃದ್ಧಿ ಕಾರ್ಯಗಳು ಮುಂದುವರೆಯಬೇಕಾದರೆ ನಮ್ಮ ಸರ್ಕಾರವೇ ಅಸ್ತಿತ್ವದಲ್ಲಿರಬೇಕು. ಬಿಜೆಪಿಯವರು ಅಧಿಕಾರಕ್ಕೆ ಬಂದಲ್ಲಿ, ಜನಪರ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಜನರಿಗೆ ಮನವರಿಕೆ ಮಾಡಿಸಿದ್ದೇನೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಮಾಡಿರುವ ಸಾಧನೆಗಳ ಆಧಾರದ ಮೇಲೆ ಮತ ಕೇಳುತ್ತಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂಬ ಭರವಸೆಯಿದೆ ಎಂದರು.

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ

ರಾಜ್ಯದಲ್ಲಿ ಬರದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಾಧ್ಯಮಗಳು ಊಹಾಪೋಹಗಳ ಮೇಲೆ ವರದಿ ಮಾಡಬಾರದು. ರಾಜ್ಯದ ಯಾವುದೇ ಭಾಗದಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

ಅಕ್ರಮ ಗಣಿಗಾರಿಕೆ: ಸಚಿವರ ವಿರುದ್ಧ ವರದಿ ಬಂದಿಲ್ಲ

ಶಾಸಕ ಜನಾರ್ಧನ ರೆಡ್ಡಿಯವರು ಸಚಿವರಾದ ಸಂತೋಷ್ ಲಾಡ್ ಹಾಗೂ ನಾಗೇಂದ್ರ ಅವರ ಮೇಲೆ ಅಕ್ರಮ ಗಣಿಗಾರಿಕೆ ಆರೋಪದ ಕುರಿತು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಅಕ್ರಮ ಗಣಿಗಾರಿಕೆ ನಡೆಸಿರುವ ಬಗ್ಗೆ ಸಾಕ್ಷ್ಯಧಾರಗಳಿದ್ದರೆ ನ್ಯಾಯಾಯಲದ ಮೊರೆ ಹೋಗಬೇಕು. ಜನಾರ್ಧನ ರೆಡ್ಡಿಯವರು ಅಕ್ರಮಗಣಿಗಾರಿಕೆಯಲ್ಲಿ ತೊಡಗಿದ್ದರು ಎಂದು ವರದಿಯಲ್ಲಿ ಬಂದ ಕಾರಣದಿಂದಾಗಿ, ನಾನು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹೋರಾಟ ಮಾಡಿ, ಪಾದಯಾತ್ರೆ ಕೈಗೊಂಡಿದ್ದೆ. ಈ ರೀತಿಯ ಯಾವ ವರದಿಗಳು  ಈ ಸಚಿವರ ಮೇಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಕಾಂಗ್ರೆಸ್ ಪರ ಜನರ ಒಲವು

ಮಂಡ್ಯದಲ್ಲಿ ಕುಮಾರಸ್ವಾಮಿಯವರು ಚುನಾವಣೆ ಎದುರಿಸುತ್ತಿರುವುದು ದೈವೇಚ್ಛೆ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮಗನನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿ ಸೋಲನ್ನು ಅನುಭವಿಸಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ದರಿಂದ ಅವರು ಹಾಸನದಲ್ಲಿ ಗೆಲುವನ್ನು ಸಾಧಿಸಿದರು. ಈ ಬಾರಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂದು ಕಾರ್ಯಪ್ರವೃತ್ತರಾಗಿದ್ದು, ಹಾಸನದ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎಂದರು.

ಯಾವುದೇ ಆತಂಕ ಇಲ್ಲ

ವರುಣಾ ಜನರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಾರಿಯ ನನ್ನ ಸರ್ಕಾರದ ಅವಧಿಯೇ ನಾಲ್ಕು ವರ್ಷವಿದೆ. ನನ್ನ 82 ನೇಯ ವಯಸ್ಸಿಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷವಾಗುತ್ತದೆ. ಚುನಾವಣೆಯ ಬಗ್ಗೆ ಯಾವುದೇ ರೀತಿಯ ಆತಂಕವಿಲ್ಲ ಎಂದರು.

ENGLISH SUMMARY..

The BJP government at the centre has betrayed the Kannadigas by not giving their tax share

Should people vote for the BJP who did not respond to the drought?: CM’s question

Mysore, April 2: Chief Minister Siddaramaiah questioned as to what moral right does Union Minister Amit Shah who did not come to the aid of the people of the state during drought, have to ask people of the state for votes. He asked whether people should vote for such a BJP candidate.

He was speaking to the media in Mysore today.

People will teach BJP a lesson

The state is not been given its share in the tax money of the state. But the former chief minister does not care about this and has become the spokesperson of BJP. This attitude of the centre is a betrayal of the Kannadigas. He said that the people of the state will teach a lesson to this attitude of BJP.

Reacting to Union Home Minister Amit Shah’s election campaign in the state, the CM said that Amit Shah, who is the chairman of the High level Committee, has not agreed to the drought relief. He questioned whether permission has been given so far for Mekedatu project and Mahadayi project.

Responding to the notice issued by the Election Commission for the statement made against Amit Shah, the CM said that a reply has been given to the notice issued by the Election Commission. He said a statement is given on the report given by CBI and said that he has already given a clarification on the matter.

Election based on achievements of Congress government

Responding to the question asked by the media about the campaign speech of the Chief Minister in Varuna Constituency yesterday, he said our government must exist if the pro-people projects and development works in the state are to continue. I have convinced people that if BJP comes to power, they will stop pro-people schemes.
I have convinced people that the projects will be stopped if BJP comes to power. The BJP is just lying. They are asking for votes based on the achievements of the Congress government and we are hopeful that the people will make the Congress party win’ he said.

Measures to prevent drinking water from becoming a problem

Responding to the increased water problem due to drought in the state, the CM said that the media should not report on speculations. He said that action has been taken to ensure that drinking water does not become a problem in any part of the state.

Illegal mining: No report received against minister

Responding to MLA Janardhana Reddy’s criticism of Ministers Santosh Lad and Nagendra regarding the allegations of illegal mining, the CM said if there is evidence of illegal mining,let them go to court. Due to reports that Janardhana Reddy was involved in illegal mining, I campaigned for action against him and took out a padayatra. He clarified that no such reports have come on these ministers’

People favour -Congress in Hassan

Reacting to the former CM H.D. Kumaraswamy facing elections in Mandya, the CM said that it is God’s will. , earlier when Kumaraswamy was the Chief Minister, his son was defeated in the Mandya Lok Sabha elections. He won in Hassan as I campaigned for Prajwal Revanna in Hassan during the coalition government. The CM said that this time the Congress candidate should win in Hassan and the people of Hassan are leaning towards the Congress party.

No worries

Responding to Varuna people’s desire that Chief Minister Siddaramaiah must contest elections again, the CM said that the term of my government this time is four years. At the age of 82, my political career will reach 50 years. He said that he has no anxiety about the elections.
.

Key words: BJP, drought, CM Siddaramaiah