Saturday, August 22, 2026

BDA Apartments

Home Front Page ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಏಪ್ರಿಲ್ 30, 2023 (www.justkannada.in): ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಿದ್ಧವಾಗಿದ್ದು, ಮೇ 1ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇವಲ 11 ದಿನ ಬಾಕಿಯಿದ್ದು, ಇದೀಗ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಪ್ರಣಾಳಿಕೆಯಲ್ಲಿ ಹಲವು ಮಹತ್ವದ ಅಂಶಗಳು ಇರಲಿದ್ದು, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಕೊಡುಗೆಗಳ ಭರವಸೆಯನ್ನು ಪ್ರಣಾಳಿಕೆ ಒಳಗೊಂಡಿರುವ ನಿರೀಕ್ಷೆಯಿದೆ.