ಬೆಂಗಳೂರು,ಜನವರಿ,16,2026 (www.justkannada.in): ಮಹಾರಾಷ್ಟ್ರದ ಬೃಹತ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಆರ್.ಅಶೋಕ್, ಬಿಎಂಸಿ ರೀತಿಯಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿಯೂ (GBA) ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶಗಳಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪತನದ ಹಾದಿ ಆರಂಭವಾಗುವುದು ನಿಶ್ಚಿತ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಜೆಡಿಎಸ್ ನಾಯಕರು ಇಂದು ಸಭೆ ನಡೆಸಿದ್ದಾರೆ. ಇನ್ನೂ ಜೆಡಿಎಸ್ ನಿಂದ ಅಭಿಪ್ರಾಯ ಬಂದಿಲ್ಲ. ಅಭಿಪ್ರಾಯ ಬಂದ ಬಳಿಕ ಹೈಕಮಾಂಡ್ ನೊಂದಿಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.
Key words: BJP, will ,win, GBA elections, R. Ashok







