ಬಿಜೆಪಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ: ಆದ್ರೆ ಬಿಎಸ್ ವೈ ನೇತೃತ್ವದಲ್ಲಿ ಅಲ್ಲ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್……

ವಿಜಯಪುರ,ಮಾರ್ಚ್,30,2021(www.justkannada.in):  ಬಿಜೆಪಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ಆದ್ರೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಲ್ಲ. ಮೇ 2ರ ಬಳಿಕ ಸಿಎಂ ಬಿಎಸ್ ವೈ ಬದಲಾಗುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.Government,Social,Economic,Educational,survey,Report,Should,receive,Former CM,Siddaramaiah 

ಇಂದು ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಪೊಲೀಸ್ ಇಲಾಖೆ ವಿಫಲವಾಗಿಲ್ಲ. ಸರ್ಕಾರ ಪೊಲೀಸ್ ಇಲಾಖೆ ಮೇಲೆ ಸುಮ್ಮನೆ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಅವರಿಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದರು.

 BJP government - complete –five year-not led –CM  BS Yeddyurappa-MLA Basanagowda Patil Yatnal.
ಕೃಪೆ-internet

ಸಿಡಿ ಪ್ರಕರಣ ಕುರಿತು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್,  ಡಿಕೆ ಶಿವಕುಮಾರ್ ನನಗೆ ರಕ್ಷಣೆ ಕೊಟ್ಟಿದ್ದಾರೆ ಎಂದು ಸ್ವತಃ ಸಂತ್ರಸ್ತೆ ಯುವತಿ ಹೇಳುತ್ತಾಳೆ.  ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ಅವರ ಒಳ ಒಪ್ಪಂದವಿದೆ. ಡಿ.ಕೆ ಶಿವಕುಮಾರ್ ಬಗ್ಗೆ ಬಿಎಸ್ ವೈ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಯತ್ನಾಳ್  ಹೇಳಿದರು.

Key words: BJP government – complete –five year-not led –CM  BS Yeddyurappa-MLA Basanagowda Patil Yatnal.