Sunday, August 2, 2026

BDA Apartments

Home Front Page ಬೈ ಎಲೆಕ್ಷನ್ ಬಳಿಕ ಬಿಜೆಪಿ ಸರ್ಕಾರ ಪತನ ಎಂದು ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ಧರಾಮಯ್ಯ:...

ಬೈ ಎಲೆಕ್ಷನ್ ಬಳಿಕ ಬಿಜೆಪಿ ಸರ್ಕಾರ ಪತನ ಎಂದು ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ಧರಾಮಯ್ಯ: ಜೆಡಿಎಸ್ ಜತೆ ಮೈತ್ರಿ ಬಗ್ಗೆ ಏನಂದ್ರು ಗೊತ್ತೆ…?

ಗದಗ,ಅ,26,2019(www.justkannada.in):  ರಾಜ್ಯದಲ್ಲಿ ನಡೆಯುವ ಉಪಚುನಾವಣೆಯ ಬಳಿಕ  ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಭವಿಷ್ಯ ನುಡಿದರು.

ಗದಗದಲ್ಲಿ ಇಂದು ಮಾಧ್ಯಮದವರ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ,  ಕಾಂಗ್ರೆಸ್ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದೆ.  ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದ ಬಳಿಕ ಬಿಜೆಪಿ ಸರ್ಕಾರಪತನವಾಗಿ ಬಿಜೆಪಿಯವರು ರಾಜೀನಾಮೆ ಕೊಟ್ಟು ಮನೆಗೆ ಹೋಗುತ್ತಾರೆ.  ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಉಪಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ,  ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮುಗಿದ ಅಧ್ಯಾಯ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

Key words: BJP government –felldown—after- by-election- Former CM -Siddaramaiah