Tuesday, September 22, 2026

BDA Apartments

ಬಿಜೆಪಿ ಸರ್ಕಾರ ರಾಜ್ಯದ ಜನರ ನೋವಿಗೆ ಸ್ಪಂದಿಸುತ್ತಿಲ್ಲ- ಪರಿಷತ್ ವಿಪಕ್ಷ ನಾ...
Home Front Page ಬಿಜೆಪಿ ಸರ್ಕಾರ ರಾಜ್ಯದ ಜನರ ನೋವಿಗೆ ಸ್ಪಂದಿಸುತ್ತಿಲ್ಲ- ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ವಾಗ್ದಾಳಿ…

ಬಿಜೆಪಿ ಸರ್ಕಾರ ರಾಜ್ಯದ ಜನರ ನೋವಿಗೆ ಸ್ಪಂದಿಸುತ್ತಿಲ್ಲ- ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ವಾಗ್ದಾಳಿ…

ನವದೆಹಲಿ,ಅ,17,2019(www.justkannada.in):  ಬಿಜೆಪಿ ಸರ್ಕಾರ ರಾಜ್ಯದ ಜನರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ವಾಗ್ದಾಳಿ ನಡೆಸಿದರು.

ನವದೆಹಲಿಯಲ್ಲಿ  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಕಾಂಗ್ರೆಸ್ ನಾಯಕ ಎಸ್.ಆರ್ ಪಾಟೀಲ್ ಭೇಟಿಯಾಗಿ ಚರ್ಚೆ ಮಾಡಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ಸಾಮೂಹಿಕ ನಾಯಕತ್ವದಲ್ಲಿ ನಾವು ಉಪಚುನಾವಣೆ ಎದುರಿಸಬೇಕಿದೆ. ಉಪ ಚುನಾವಣೆಯಲ್ಲಿ ನಾವೇ ಹೆಚ್ಚು ಸ್ಥಾನ ಗೆಲ್ಲಬೇಕಿದೆ. ಚುನಾವಣೆಯಲ್ಲಿ ವೈಯಕ್ತಿಕ ಪ್ರತಿಷ್ಟೆಯನ್ನು ಬದಿಗಿಟ್ಟು ದುಡಿಯುವಂತೆ ಸಲಹೆ ನೀಡಿದ್ದಾರೆ. ಎಲ್ಲಾ  ಸಮುದಾಯದ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು  ಕೆಲಸ ಮಾಡುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದರು.

ರಾಜ್ಯದ ಜನರಿಗೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದ ಜನರ ಸಂಕಷ್ಟಕ್ಕೆ ಕೇಂದ್ರ ರಾಜ್ಯ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.

Key words:  BJP government – not responding – people –state- SR Patil