ಇಂದು ಬಿಜೆಪಿ ಮಹತ್ವದ ಸಭೆ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ಸಾಧ್ಯತೆ..

ಬೆಂಗಳೂರು,ಜೂನ್,8,2023(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಚಿವ ಸಂಪುಟ ರಚನೆಯಾಗಿದ್ದು,  ಆದರೆ ವಿಪಕ್ಷ ನಾಯಕ ಆಯ್ಕೆ ವಿಳಂಬವಾಗಿದೆ. ಈ ನಡುವೆ ಇಂದು ಬಿಜೆಪಿ ಮಹತ್ವದ ಸಭೆ ನಡೆಯಲಿದ್ದು ಸಭೆಯಲ್ಲಿ ವಿಪಕ್ಷ ನಾಯಕ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇಂದು ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್  ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.  ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಇಂದು ಒಟ್ಟು ಮೂರು ಸಭೆ ನಡೆಯಲಿದ್ದು, ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

Key words: BJP – important- meeting- today-discussion – opposition leader