Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ: ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ- ಮಾಜಿ ಸಿಎಂ...

ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ: ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ- ಮಾಜಿ ಸಿಎಂ ಬೊಮ್ಮಾಯಿ.

ಬೆಂಗಳೂರು,ಸೆಪ್ಟಂಬರ್,8,2023(www.justkannada.in):  ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಎರಡೂ ಪಕ್ಷಗಳು ಮೈತ್ರಿ  ಬಹುತೇಕ ಫಿಕ್ಸ್ ಎನ್ನಲಾಗಿದೆ.   ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸುವುದು ಖಚಿತವಾಗಿದೆ. ಈ  ಕುರಿತು ಮಾಜಿ ಸಿಎಂ  ಬಿಎಸ್ ವೈ ಬೆನ್ನಲ್ಲೆ ಈಗ ಬಸವರಾಜ ಬೊಮ್ಮಾಯಿ ಸಹ ಖಚಿತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ  ಬಸವರಾಜ ಬೊಮ್ಮಾಯಿ, ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ, ಮಹತ್ವದ್ದಾಗಿದೆ. ಈ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವುದು ಮುಖ್ಯವಾಗಿತ್ತು. ಹೀಗಾಗಿ ನಾವು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮೈತ್ರಿ ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ ಆಗಲಿದೆ. ನಮ್ಮ ಹೈಕಮಾಂಡ್ ಇದರ ಬಗ್ಗೆ  ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.ಈ ಮೈತ್ರಿ ಮಾತುಕತೆ ಬಹಳ ಅವಶ್ಯಕ: ಸ್ಥಾನಗಳ ಹಂಚಿಕೆ ಬಗ್ಗೆ ಮುಂದೆ ತೀರ್ಮಾನ- ಮಾ...

Key words: BJP-JDS-alliance-Former CM-Basavaraj bommai