Sunday, August 9, 2026

BDA Apartments

Home Front Page ಸ್ಪೀಕರ್ ಮತ್ತು ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಬಿಜೆಪಿ ಮತ್ತು ಜೆಡಿಎಸ್ ದೂರು..

ಸ್ಪೀಕರ್ ಮತ್ತು ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಬಿಜೆಪಿ ಮತ್ತು ಜೆಡಿಎಸ್ ದೂರು..

 ಬೆಂಗಳೂರು,ಜುಲೈ,20,2023(www.justkannada.in): 10 ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ  ಇಂದು ಪ್ರತಿಭಟನೆ ನಡೆಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಬಳಿಕ ಪಾಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಬಿಜೆಪಿ ನಾಯಕರು ಸ್ಪೀಕರ್ ಮತ್ತು ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದರು.

ಬಿಜೆಪಿ ಶಾಸಕರ ಅಮಾನತು ಖಂಡಿಸಿ ಜೆಡಿಎಸ್‌, ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡುವ ವೇಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು.

Key words: BJP – JDS -complain – Governor -against -Speaker and Govt.