ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

0
3

ಮೈಸೂರು,ನವೆಂಬರ್,29,2023(www.justkannada.in): ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ  ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಬರಗಾಲ ಪರಿಸ್ಥಿತಿಯನ್ನು ಪ್ರಮುಖ ವಿಚಾರವಾಗಿ ಪ್ರಸ್ತಾಪಿಸುತ್ತೇವೆ. ಬಿಜೆಪಿ ಜೆಡಿಎಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ಇಬ್ಬರೂ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.

ಬರಗಾಲದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ಈ ಬಗ್ಗೆ ನನಗೆ ತಿಳುವಳಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರ ಪರಿಸ್ಥಿತಿ ಸಂಬಂಧ ಇವರು ಏನು ಮಾಡಿದ್ದಾರೆ ಎಂದು ಹೇಳಲಿ. ಕೇಂದ್ರ ಸರ್ಕಾರದ್ದು ಎರಡನೇ ಸ್ಟೆಜ್‌. ಮೊದಲ‌ ಸ್ಟೇಜ್ ನಲ್ಲಿ ಇವರು ಏನು ಮಾಡಿದ್ದಾರೆಂದು ಹೇಳಬೇಕು. ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣವನ್ನು ಏನು ಮಾಡಿದ್ದಾರೆ. ಕುಡಿಯುವ ನೀರು ಮೇವಿಗೆ ಹೊರತುಪಡಿಸಿದರೆ ಬೇರೆ ಯಾವುದಕ್ಕೂ ಹಣ ಬಿಡುಗಡೆ ಮಾಡಿಲ್ಲ‌ ಎಂದು ಹೆಚ್.ಡಿಕೆ ಆರೋಪಿಸಿದರು.

Key words: BJP-JDS – fight -against -government – Belgaum session -HD Kumaraswamy.