ಬೆಂಗಳೂರು,ಆಗಸ್ಟ್,11,2025 (www.justkannada.in): ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭಕ್ಕೂ ಮುನ್ನ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸಿವೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೇ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಧರಣಿ ನಡೆಸಿದೆ.
ಸದನ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಇದರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಬಿಜೆಪಿ ಜೆಡಿಎಸ್ ಶಾಸಕರು ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.
Key words: BJP, JDS, protest, against , government