Saturday, September 19, 2026

BDA Apartments

Home Front Page ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆ ವಿಚಾರ – ಸ್ಪಷ್ಟನೆ ನೀಡಿದ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ….

ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆ ವಿಚಾರ – ಸ್ಪಷ್ಟನೆ ನೀಡಿದ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ….

ಮಂಡ್ಯ,ಡಿ,17,2019(www.justkannada.in):   ಮಂಡ್ಯ ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ಹರಡಿದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ನಾನು ಮತ್ತು ಸುರೇಶ್ ಗೌಡ ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗುತ್ತೇವೆಂಬುದು ಸುಳ್ಳು. ನಾವು ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ. ಈ ವಿಚಾರ ಸಂಪೂರ್ಣ ಸುಳ್ಳು. ನಾವು ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದರು.

ಹಾಗೆಯೇ ನಮ್ಮನ್ನ ಬಿಜೆಪಿಯಿಂದ ಯಾರೂ ಸಂಪರ್ಕಿಸಿಲ್ಲ. ಯಾರೂ ಸಹ ನಮಗೆ ಆಹ್ವಾನ ನೀಡಿಲ್ಲ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಮಂಡ್ಯದ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜಕೀಯ ಭವಿಷ್ಯಕ್ಕಾಗಿ ಮಂಡ್ಯ ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಹರಡಿತ್ತು.

Key words: BJP- joins- JDS- Srirangapatna MLA -Ravindra Srikantayya -clarified