ಕಲ್ಯಾಣ ಕರ್ನಾಟಕ ಭಾಗಕ್ಕೆ ಬಿಜೆಪಿ ಕೊಡುಗೆ ಶೂನ್ಯ-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಏಪ್ರಿಲ್,12,2024 (www.justkannada.in):  ಬಿಜೆಪಿಯವರಿಗೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಬೇಕಾಗಿಲ್ಲ. ಈ ಭಾಗಕ್ಕೆ  ಬಿಜೆಪಿ ಕೊಡುಗೆ ಶೂನ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.

ಲೋಕಸಭಾ ಚುನಾವಣೆ ಹಿನ್ನಲೆ ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ರಾಧಕೃಷ್ಣ ಪರ ಪ್ರಚಾರ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ನನ್ನ ಗುರಿ ಒಂದೇ ಈ ಭಾಗವನ್ನು ಅಭಿವೃದ್ದಿ ಮಾಡುವ ಮೂಲಕ ಬಸವಣ್ಣನ, ಅಂಬೇಡ್ಕರ್ ತತ್ವ ಉಳಿಯಬೇಕು ಎನ್ನುವುದು. ಇದು ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವ ಚುನಾವಣೆ. ಈಗಾಗಲೆ ಮೋದಿ ಎಲ್ಲ ಮಷಿನರಿ ಬಳಸಿಕೊಂಡು ಪ್ರಜಾಪ್ರಭುತ್ವ ಹಾಳು ಮಾಡುತ್ತಿದ್ದಾರೆ. ಅದನ್ನ ನಾವು ಉಳಿಸಬೇಕಾಗಿದೆ. ಅದಕ್ಕಾಗಿ ಎಲ್ಲರೂ ಕಾಂಗ್ರೆಸ್​ ಗೆ ಮತ ನೀಡಿ ಎಂದು ಮನವಿ ಮಾಡಿದರು.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಘೋಷಿಸಿರುವ 25 ಗ್ಯಾರಂಟಿಗಳಿನ್ನ ಜಾರಿ ಮೂಲಕ ಕೊಟ್ಟ  ಭರವಸೆ ಈಡೇರಿಸುತ್ತೇವೆ. ಎಲ್ಲೇ ಕೇಳಿದರೂ ನಾನು ಒಳ್ಳೆಯ ಕೆಲಸ ಮಾಡಿದ್ದೇನೆಂದು ಹೇಳುತ್ತಿರಾ, ಆದರೆ, ಮತಗಟ್ಟೆಗೆ ಹೋದಾಗ ನಿಮಗೆ ಏನು ಅನಿಸುತ್ತೋ ಗೊತ್ತಿಲ್ಲ, ನಮ್ಮನ್ನೇ ಮರೆತು ಬಿಡ್ತೀರಾ ಎಂದು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದರು.

Key words: BJP, Kalyan Karnataka, Mallikarjuna Kharge