ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ: ಶೀಘ್ರವೇ ಆರೋಪಿಗಳ ಬಂಧನ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜುಲೈ,27,2022(www.justkannada.in):  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಎಂಬುವವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ,  ಈ ಕುರಿತು ನಾನು ಗೃಹ ಸಚಿವರ ಜೊತೆಗೂ ಮಾತಾಡಿದ್ದೇನೆ. ಶೀಘ್ರವೇ ಆರೋಪಿಗಳನ್ನ ಬಂಧಿಸುತ್ತೇವೆ.  ಸಂಪೂರ್ಣ ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯ ಎಸಗುವವರನ್ನ ಮಟ್ಟ ಹಾಕುತ್ತೇವೆ ಎಂದು ಹೇಳಿದ್ದಾರೆ.

Key words: BJP leader –Praveen- murder- case- CM- Basavaraj Bommai.