‘ಮೈಲಾಕ್’ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ರಘು ಕೌಟಿಲ್ಯ ನೇಮಕ.

0
2

ಬೆಂಗಳೂರು,ಜುಲೈ,25,2022(www.justkannada.in):ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರನ್ನ ನೇಮಕ ಮಾಡಲಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಅಧೀನ ಕಾರ್ಯದರ್ಶಿ ಆರ್. ಮಂಜುಳ, ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತ ಈ ಕಂಪನಿಯ ನಿಯಮಾವಳಿಗಳ ಅಂತರ ನಿಯಮ 20ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನ ಚಲಾಯಿಸಿ ಸದರಿ ಕಂಪನಿಯ ಆಡಳಿತ ಮಂಡಳಿಗೆ ರಘು ಕೌಟಿಲ್ಯ ಅವರನ್ನ ಅಧ್ಯಕ್ಷರು ಹಾಗೂ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ.

ಹಾಗೆಯೇ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಬೆಂಗಳೂರು ಕಂಪನಿಯ ನಿರ್ದೇಶಕರ ಮಂಡಳಿಗೆ ಎಂ.ಎಸ್ ಕರಿಗೌಡರನ್ನ ಅಧ್ಯಕ್ಷರು ಹಾಗೂ ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Key words: BJP leader -Raghu Kautilya -appointed – president -Mysore Paints and Varnish