Tuesday, September 22, 2026

BDA Apartments

ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿಜೆಪಿ ಮುಖಂಡ ರಾಜುಕಾಗೆ… BDA JK_Adv BDA Adv
Home Front Page ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿಜೆಪಿ ಮುಖಂಡ ರಾಜುಕಾಗೆ…

ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿಜೆಪಿ ಮುಖಂಡ ರಾಜುಕಾಗೆ…

ಬೆಂಗಳೂರು,ನ,11,2019(www.justkannada.in):  ನಿನ್ನೆಯಷ್ಟೇ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದ ಕಾಗವಾಡ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜುಕಾಗೆ ಇದೀಗ ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ಧರಾಮಯ್ಯರನ್ನ ಭೇಟಿಯಾಗಿದ್ದಾರೆ.

ನಗರದ ಕಾವೇರಿ ನಿವಾಸದಲ್ಲಿ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯರನ್ನ ಬಿಜೆಪಿ ಮುಖಂಡ ರಾಜುಕಾಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆಯಷ್ಟೇ ಸದಾಶಿವನಗರದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಮುಖಂಡರಾದ ರಾಜುಕಾಗೆ ಹಾಗೂ ಅಶೋಕ್ ಪೂಜಾರಿ ಭೇಟಿ ನೀಡಿ ಚರ್ಚೆ ನಡೆಸಿದ್ದರು.

ಕಾಗವಾಡ ಕ್ಷೇತ್ರದಲ್ಲಿ ಟಿಕೆಟ್ ಸಿಗದಿದ್ದರೇ ರಾಜುಕಾಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆ  ಉದ್ಭವಿಸಿದೆ.

Key words: BJP leader –Rajukage- met- former CM –Siddaramaiah-bangalore