ಬಿಜೆಪಿ ನಾಯಕರು ಹತಾಶೆಯಿಂದ ಆರೋಪ: ಮೊದಲು ವಿಪ‍ಕ್ಷ ನಾಯಕರನ್ನ ಆಯ್ಕೆ ಮಾಡಲಿ- ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್.

ಬೆಂಗಳೂರು,ಆಗಸ್ಟ್,10,2023(www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ 15% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ  ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಬಿಜೆಪಿ ನಾಯಕರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಹೋಗಿ ಧ್ವನಿ ಎತ್ತಬೇಕೋ ಅಲ್ಲಿ ಮಾತನಾಡುತ್ತಿಲ್ಲ. ಮೊದಲು ವಿಪಕ್ಷ ನಾಯಕರನ್ನ ಆಯ್ಕೆ ಮಾಡಲಿ ಎಂದು ತಿರುಗೇಟು ನೀಡಿದರು.

ಕಮಿಷನ್ ಕೇಳಿದ್ದಾರೆ ಅಂತಾ ಗುತ್ತಿಗೆದಾರರು ಹೇಳಿಲ್ಲ. ಯಾರು ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿಲ್ಲ. ಬಾಕಿ ಬಿಲ್ ಪಾವತಿ ವಿಳಂಬ ಅಂತಾ ಹೇಳಿದ್ದಾರೆ. ಕೆಲಸವಾಗಿದ್ದರೇ ಬಿಲ್ ಬಿಡುಗಡೆ  ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ. ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ. ಗುತ್ತಿಗೆದಾರರು ಸ್ವಲ್ಪ ಸಹನೆಯಿಂದ ಇರಬೇಕು. ಕಾಮಗಾರಿ ಪರಿಶೀಲನೆ ಮಾಡಿ ಬಿಲ್ ಪಾವತಿ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: BJP -leaders – frustration- opposition leaders – elect- first-Minister- Priyank Kharge