ಬೆಂಗಳೂರು,ನವೆಂಬರ್,10,2025 (www.justkannada.in): ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಬಿಜೆಪಿ ನಾಯಕರಾದ ಎಂಎಲ್ ಸಿ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ, ಅಶ್ವಥ್ ನಾರಾಯಣ್ ಸಿಕೆ ರಾಮಮೂರ್ತಿ ಸೇರಿ ಹಲವರ ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಜೈಲುಗಳು ನೈಟ್ ಕ್ಲಬ್ ಗಳಾಗಿವೆ. ದೇಶದ್ರೋಹಿಗಳಿಗೆ ಗುಂಡು ತುಂಡು ರಾಜಾತಿಥ್ಯ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
Key words: BJP leaders, police, custody, CM’s residence







